ODI World Cup 2023 : ಏಕದಿನ ವಿಶ್ವಕಪ್‌ ಗೆ 15 ಆಟಗಾರರ ಬಲಿಷ್ಠ ಭಾರತ ತಂಡ ಪ್ರಕಟ

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯು 15 ಆಟಗಾರರ ಪಟ್ಟಿಯನ್ನು ಅಂತಿಮ ಮಾಡಿದ್ದು, ಅದರ ಪ್ರಕಟಣೆಯನ್ನು ಇಂದು ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಭಾರತ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸುತ್ತಿದೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ದೇಶದ ವಿವಿಧ ಮೈದಾನದಲ್ಲಿ ಈ ರಣ ರೋಚಕ ಪಂದ್ಯಗನ್ನು ಆಯೋಜಿಸಲಾಗಿದೆ. ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನವನ್ನು ಆರಂಭಿಸಲಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಒಂದು ದಿನದ ಮೊದಲು ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಅಕ್ಟೋಬರ್ 4 ರಂದು ಅದ್ಧೂರಿ ಓಪನಿಂಗ್ ಸೆರಮನಿ ನಡೆಯಲಿದೆ. ಇದರಲ್ಲಿ ಎಲ್ಲ ತಂಡದ ನಾಯಕರು ಭಾಗವಹಿಸಲಿದ್ದಾರೆ.

ಭಾರತ ತಂಡ ಇಂತಿದೆ :

ರೋಹಿತ್ ಶರ್ಮಾ (ನಾಯಕ),ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ(ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

2023ರ ಐಸಿಸಿ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ವೇಳಾಪಟ್ಟಿ:

ಅಕ್ಟೋಬರ್ 8: ಭಾರತ-ಆಸ್ಟ್ರೇಲಿಯಾ, ಚೆನ್ನೈ, ಮಧ್ಯಾಹ್ನ 2 ಗಂಟೆ
ಅಕ್ಟೋಬರ್ 11: ಭಾರತ-ಅಫ್ಘಾನಿಸ್ತಾನ, ನವದೆಹಲಿ, ಮಧ್ಯಾಹ್ನ 2 ಗಂಟೆ
ಅಕ್ಟೋಬರ್ 14: ಭಾರತ-ಪಾಕಿಸ್ತಾನ, ಅಹಮದಾಬಾದ್, ಮಧ್ಯಾಹ್ನ 2 ಗಂಟೆ
ಅಕ್ಟೋಬರ್ 19: ಭಾರತ-ಬಾಂಗ್ಲಾದೇಶ, ಪುಣೆ, ಮಧ್ಯಾಹ್ನ 2 ಗಂಟೆ
ಅಕ್ಟೋಬರ್ 22: ಭಾರತ-ನ್ಯೂಜಿಲೆಂಡ್, ಧರ್ಮಶಾಲಾ, ಮಧ್ಯಾಹ್ನ 2 ಗಂಟೆ
ಅಕ್ಟೋಬರ್ 29: ಭಾರತ-ಇಂಗ್ಲೆಂಡ್, ಲಕ್ನೋ, ಮಧ್ಯಾಹ್ನ 2 ಗಂಟೆ
ನವೆಂಬರ್ 2: ಭಾರತ-ಶ್ರೀಲಂಕಾ, ಮುಂಬೈ, ಮಧ್ಯಾಹ್ನ 2 ಗಂಟೆ
ನವೆಂಬರ್ 5: ಭಾರತ-ದಕ್ಷಿಣ ಆಫ್ರಿಕಾ, ಕೋಲ್ಕತಾ, ಮಧ್ಯಾಹ್ನ 2 ಗಂಟೆ
ನವೆಂಬರ್ 12: ಭಾರತ-ನೆದರ್ಲ್ಯಾಂಡ್ಸ್, ಬೆಂಗಳೂರು, ಮಧ್ಯಾಹ್ನ 2 ಗಂಟೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read