alex Certify ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸಂಗತಿ: ಕೈತಪ್ಪಿ ಹೋಯ್ತು ಟಿ-20 ವಿಶ್ವಕಪ್ ಆತಿಥ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸಂಗತಿ: ಕೈತಪ್ಪಿ ಹೋಯ್ತು ಟಿ-20 ವಿಶ್ವಕಪ್ ಆತಿಥ್ಯ

ICC T20 World Cup 2021 Shifted to UAE, due to Coronavirus fear in India, Said  BCCI President Sourav Ganguly | वही हुआ जिसका डर था, भारत के हाथों से फिसल  गई T20

ಕೊರೊನಾ ವೈರಸ್ ಕ್ರಿಕೆಟ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಐಸಿಸಿ ಟಿ 20 ವಿಶ್ವಕಪ್ 2021 ರ ಆತಿಥ್ಯ ಭಾರತದ ಕೈತಪ್ಪಿ ಹೋಗಿದೆ. ಬಿಸಿಸಿಐ ಈ ಬಗ್ಗೆ ಮಾಹಿತಿ ನೀಡಿದೆ.

ಅಕ್ಟೋಬರ್-ನವೆಂಬರ್‌ನಲ್ಲಿ ಕೊರೊನಾ ಮೂರನೇ ಅಲೆ ದೇಶವನ್ನು ಆವರಿಸುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಇದನ್ನು ಗಮನದಲ್ಲಿಟ್ಟುಕೊಂಡು ಟಿ 20 ವಿಶ್ವಕಪ್ ಪಂದ್ಯಾವಳಿಯನ್ನು ಭಾರತದ ಬದಲು ಯುಎಇಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ ಅಧಿಕೃತ ಹೇಳಿಕೆ ನೀಡಿದ್ದಾರೆ.

ಐಸಿಸಿಗೆ ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗಿದ್ದು, ಅದು ತಯಾರಿ ನಡೆಸಲಿದೆ ಎಂದು ಗಂಗೂಲಿ ಹೇಳಿದ್ದಾರೆ. ಟಿ-20 ವಿಶ್ವಕಪ್ ನಡೆಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐಗೆ ಐಸಿಸಿ ನಾಲ್ಕು ವಾರಗಳ ಅವಕಾಶ ನೀಡಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...