ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಗೆದ್ದು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಸುಧಾರಣೆ ಕಂಡರೆ, ಇಂಗ್ಲೆಂಡ್ ಸೋಲು ಭಾರತಕ್ಕೆ ಹಿನ್ನಡೆಯಾಗುವಂತೆ ಮಾಡಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಸದ್ಯ ಶ್ರೀಲಂಕಾ 24 ಅಂಕಗಳು ಹಾಗೂ ಶೇ.100 ಪಿಸಿಟಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಇದು ಕೂಡ 24 ಅಂಕಗಳೊಂದಿಗೆ ಶೇ. 100 ಪಿಸಿಟಿ ಹೊಂದಿದೆ.
ಇಂಗ್ಲೆಂಡ್ ಸೋಲು ಹಾಗೂ ಆಸ್ಟ್ರೇಲಿಯಾದ ಗೆಲುವಿನಿಂದ ಭಾರತಕ್ಕೆ ತೀವ್ರ ಹಿನ್ನಡೆಯಾಗಿದ್ದು, ಶೇ. 58.3 ಪಿಸಿಟಿಯೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಪಾಕ್ ತಂಡವು ಶೇ.75 ಪಿಸಿಟಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.
ಸೋಲಿನಿಂದ ಕಂಗೆಟ್ಟಿರುವ ಇಂಗ್ಲೆಂಡ್ 7ನೇ ಸ್ಥಾನಕ್ಕೆ ಕುಸಿದಿದೆ. ಭಾರತ ತಂಡವು ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಬೇಕಾದರೆ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುವ ಪ್ರತಿ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.