alex Certify ICSE 10ನೇ ತರಗತಿ ಪರೀಕ್ಷೆಯಲ್ಲಿ ಯಲ್ಲಾಪುರದ ಹುಡುಗಿ ಗುಜರಾತಿಗೆ ಫಸ್ಟ್ ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ICSE 10ನೇ ತರಗತಿ ಪರೀಕ್ಷೆಯಲ್ಲಿ ಯಲ್ಲಾಪುರದ ಹುಡುಗಿ ಗುಜರಾತಿಗೆ ಫಸ್ಟ್ !

ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಗುಜರಾತಿನಲ್ಲಿ ಪರೀಕ್ಷೆ ಬರೆದಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿನಿಯೊಬ್ಬರು ಆ ರಾಜ್ಯದಲ್ಲಿ ಮೊದಲಿಗರಾಗುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಬೀಗಾರಿನ ದಿಶಿತಾ ಕೋಮಾರ ಗುಜರಾತ್ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದು ಇವರು, 1996 ಬ್ಯಾಚ್ ಐಪಿಎಸ್ ಅಧಿಕಾರಿ ನರಸಿಂಹ ಕೋಮಾರ ಅವರ ಪುತ್ರಿಯಾಗಿದ್ದಾರೆ.

ನರಸಿಂಹ ಕೋಮಾರ ಅವರು ಗುಜರಾತಿನ ಗಾಂಧಿನಗರದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಅಧಿಕಾರಿಯಾಗಿದ್ದು, ಉದ್ಯೋಗ ನಿಮಿತ್ತ ಅಲ್ಲಿ ನೆಲೆಸಿದ್ದಾರೆ. ಇವರ ಪುತ್ರಿ ದಿಶಿತಾ ಕೋಮಾರ ಐಸಿಎಸ್‌ಸಿ 10ನೇ ತರಗತಿ ಫಲಿತಾಂಶದಲ್ಲಿ 500 ಕ್ಕೆ 497 ಅಂಕಗಳಿಸಿ ಗುಜರಾತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...