
ಚಿಕ್ಕಬಳ್ಳಾಪುರ: ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 75 ತಾಲೂಕುಗಳಲ್ಲಿ ಟೆಲಿ ಐಸಿಯು ಘಟಕ ನಡೆಯುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಟೆಲಿ ಐಸಿಯು ಘಟಕಗಳನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಕೂಡ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.