alex Certify ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳ ಅಧಿಕಾರಿಗಳು, ನೌಕರರು ಗುರುತಿನ ಚೀಟಿ ಧರಿಸದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದಾಗಿ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿ ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ.

ಹಾಗಾಗಿ, ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ನಿಗಮ ಮಂಡಳಿಗಳ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ತಿಳಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸುವವರನ್ನು ಪತ್ತೆ ಹಚ್ಚಿ ಬಿಗಿ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...