ಮಂಗಳೂರು : ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ‘ನೈತಿಕ ಪೊಲೀಸ್ ಗಿರಿಗೆ ಕಾನೂನಿನಲ್ಲಿ ಅವಕಾಶವಿಲ್ಲ, ಯಾರಾದರೂ ನೈತಿಕ ಪೊಲೀಸ್ ಗಿರಿ ನಡೆಸಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ, ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕೂಡ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಳೆಹಾನಿ ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ, ಉಡುಪಿ ಹಾಗೂ ಮಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮಳೆಹಾನಿ ಪರಿಶೀಲನೆ ನಡೆಸಿ ನಂತರ ಸಭೆ ಮಾಡುತ್ತೇನೆ ಎಂದರು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಕಡೆ ಮನೆಗಳು, ರಸ್ತೆ ಕುಸಿದು ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ (ಆಗಸ್ಟ್ 1) ಇಂದಿನಿಂದ ರಾಜ್ಯದ ಮಳೆಪೀಡಿತ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಮೊದಲು ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಸಿಎಂ ಆಲಿಸಲಿದ್ದಾರೆ.