ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಧಮ್ ಇದ್ದರೆ ಮೌಲ್ವಿ ಪ್ರಕರಣ ‘NIA’ ಗೆ ವಹಿಸಲಿ ಎಂದು ಬಿಜೆಪಿ ಶಾಸಕ ಯತ್ನಾಳ್ ಸವಾಲ್ ಹಾಕಿದ್ದಾರೆ.
ಐಸಿಸ್ ಉಗ್ರನ ಬೆಂಬಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದರು. ಈ ಗಂಭೀರ ಆರೋಪ ಹೊಸ ತಿರುವು ಪಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಮೌಲ್ವಿ ಜೊತೆಗೆ ಪ್ರಧಾನಿ ಮೋದಿ ಇರುವ ಫೋಟೋ ಹಂಚಿಕೊಡು ತಿರುಗೇಟು ನೀಡಿದ್ದರು.
ಸಿದ್ದರಾಮಯ್ಯ ಸರ್ಕಾರಕ್ಕೆ, ಸಚಿವರಿಗೆ ಧಮ್ಮು, ತಾಕತ್ತು ಇದ್ದರೆ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಿ, ಆಗ ಎಲ್ಲಾ ಸತ್ಯಾಂಶ ಹೊರಗೆ ಬರುತ್ತದೆ ಎಂದು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರಕ್ಕೆ, ಸಚಿವರಿಗೆ ಧಮ್ಮು, ತಾಕತ್ತು ಇದ್ದರೆ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಿ. ಮೌಲ್ವಿ ವಿರುದ್ಧದ ತನಿಖೆಗೆ ನಾನು ಸಿದ್ಧನಿದ್ದೇನೆ. ಮೌಲ್ವಿಗೂ ನಮಗೂ ಸಂಬಂಧವಿಲ್ಲ ಎಂದು ಸಿಎಂ ಹೇಳಿಕೆ ಕೊಟ್ಟಿದ್ದಾರೆ. ತನಿಖೆ ಮಾಡಿಸಲಿ ನೋಡೋಣ ಎಂದು ಸವಾಲ್ ಹಾಕಿದರು.
ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಯತ್ನಾಳ್ ಮೊದಲು ಗಂಭೀರ ಆರೋಪ ಮಾಡಿದ್ದರು.