ನವದೆಹಲಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ಮಧ್ಯಪ್ರದೇಶದ ಮಂಡ್ಲಾದಲ್ಲಿ ಮಾತನಾಡಿದ ರಾಹುಲ್ ಗಾಂಧಿ ನಮ್ಮ ದೇಶದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿಯಿದೆ, ಆದರೆ ಕೇಂದ್ರ ಸರ್ಕಾರ ಈ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ನಾವು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ 30 ಲಕ್ಷ ಉದ್ಯೋಗ ಭರ್ತಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷವು ಯುವಕರಿಗಾಗಿ ಏನು ಮಾಡಲು ಹೊರಟಿದೆ , ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ.. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಮಾಡುವ ಮೊದಲ ಕೆಲಸವೆಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವುದಾಗಿದೆ ಎಂದರು.