ಮೈಸೂರು : ನನ್ನ ಬಳಿ ಮೈಸೂರಿನಲ್ಲಿ ಸ್ವಂತ ಮನೆಯಿಲ್ಲ. ಇಷ್ಟು ವರ್ಷಗಳ ಕಾಲ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಆಸ್ತಿ, ಐಶ್ವರ್ಯದ ಹಿಂದೆ ಹೋಗಿದ್ದರೆ ನಾನು ಹೀಗಿರಬೇಕಿತ್ತೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ₹501.81 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿರು.
ನಾನು ರಾಜಕೀಯ ಪ್ರವೇಶ ಮಾಡಿ 45 ವರ್ಷಗಳಾಗಿದೆ. ಮಂತ್ರಿಯಾಗಿ 40 ವರ್ಷಗಳಾಗಿದೆ. 5 ವರ್ಷ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದೇನೆ. ನನ್ನ ಬಳಿ ಮೈಸೂರಿನಲ್ಲಿ ಸ್ವಂತ ಮನೆಯಿಲ್ಲ. ಇಷ್ಟು ವರ್ಷಗಳ ಕಾಲ ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಆಸ್ತಿ, ಐಶ್ವರ್ಯದ ಹಿಂದೆ ಹೋಗಿದ್ದರೆ ನಾನು ಹೀಗಿರಬೇಕಿತ್ತೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ? ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ. ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದಿದ್ದಾರೆ.
ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಂಕರ ಅನ್ಯಾಯ ಮಾಡಿದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಅನ್ಯಾಯದ ವಿರುದ್ಧ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ನ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು. ರಾಜ್ಯಕ್ಕೆ ₹5,495 ಕೋಟಿ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ ಅನುದಾನ ನೀಡಲು ಹಣಕಾಸು ಆಯೋಗ ಮಾಡಿದ್ದ ಶಿಫಾರಸ್ಸನ್ನು ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದರು. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಎಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ? ಲೋಕಸಭಾ ಚುನಾವಣೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ನರೇಂದ್ರ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ, ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ. ಎಂದರು.