ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯ ಸಂಭ್ರಮಾಚಾರಣೆ ವೇಳೆ ನಾಸೀರ್ ಹುಸೇಸ್ ಬೆಂಬಲಿಗ ಎನ್ನಲಾದ ವ್ಯಕ್ತಿಯೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು ಎಂದರು.
ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.