ಬೆಂಗಳೂರು : ರಾಮನಗರವನ್ನು ಬೆಂಗಳೂರಿಗೆ ಸೇರಿಸಿದ್ರೆ ಕಾರ್ಪೊರೇಟ್ ಗಳು, ಭೂ ಮಾಫಿಯಾಗಳು ಪ್ರಾಬಲ್ಯ ಸಾಧಿಸುತ್ತವೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ನಟ ಚೇತನ್ ಅಹಿಂಸಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
”ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಬಯಸಿದೆ. ರಾಮನಗರ ಎಂಬ ಹೆಸರು ಟಿಪ್ಪುವಿನ ಕಾಲದಲ್ಲಿ ಶಮಸೇರಾಬಾದ್ ಎಂದು ಕರೆಯಲ್ಪಡುವ ಪ್ರದೇಶದ ವಿಶಿಷ್ಟ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ನೀಡುತ್ತದೆ. ರಾಮನಗರವನ್ನು ಬೆಂಗಳೂರು ನಗರಕ್ಕೆ ಸೇರಿಸಿದರೆ, ರೈತರು ಮತ್ತು ಸ್ಥಳೀಯ ಪರಂಪರೆಗೆ ಯಾವುದೇ ಪ್ರಯೋಜನವಾಗುವುದಿಲ್ಲ, ಬದಲಿಗೆ, ಕಾರ್ಪೊರೇಟ್ಗಳು, ಭೂ ಮಾಫಿಯಾಗಳು ಮತ್ತು ಎಸ್ಇಝಡ್ಗಳು ಪ್ರಾಬಲ್ಯ ಸಾಧಿಸುತ್ತವೆ” ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.