ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಸರ್ಕಾರ ಇಂದೇ ಬೆಂಬಲ ಬೆಲೆ ನಿಗದಿ ಮಾಡಬೇಕು ಇಲ್ಲವಾದಲ್ಲಿ ಸದನದಲ್ಲಿ ಅಹೋರಾತ್ರಿ ಧರಣಿ ಮಾಡುವುದಾಗಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ನಿಯಮ 69ರಡಿ ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ಹೆಚ್.ಡಿ.ರೇವಣ್ಣ, ಕೊಬ್ಬರಿಗೆ ಬೆಂಬಲ ಬೆಲೆ ನಿರ್ಣಯ ಮಾಡಬೇಕು. ಸರ್ಕಾರ ಇಂದೇ ಬೆಂಬಲ ಬೆಲೆ ಬಗ್ಗೆ ನಿರ್ಣಯ ಮಾಡಲಿ. ಇಲ್ಲವಾದರೇ ಇಲ್ಲೇ ಪಂಚೆ ಹಾಸಿಕೊಂಡು ಸದನದಲ್ಲೇ ಮಲಗುತ್ತೇವೆ ಎಂದು ಹೇಳಿದ್ದಾರೆ.
ಸ್ಪೀಕರ್ ಯು.ಟಿ.ಖಾದರ್ ಅವರೇ ಊಟ ಹಾಕಿಸುತ್ತಾರೆ. ಕೊಬ್ಬರಿಗೆ ಇಂದೇ ಬೆಂಬಲ ಬೆಲೆ ತೀರ್ಮಾನ ಮಾಡಲಿ. ಇಲ್ಲವಾದರೆ ನಾವು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಪಟ್ಟು ಹಿಡಿದ್ದಾರೆ.