![](https://kannadadunia.com/wp-content/uploads/2019/09/cheluvarayaswamy-400x224.jpeg)
ಬೆಂಗಳೂರು : ಮುಂದಿನ ಮೂರು ದಿನಗಳಲ್ಲಿ ಮಳೆ ಬಾರದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ( Agriculture Minister Chaluvarayaswamy) ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು 4-5 ದಿನಗಳ ಹಿಂದೆಯೇ ರಾಜ್ಯಕ್ಕೆ ಮುಂಗಾರು ಮಾರುತಗಳು ಆಗಮಿಸಿದ್ದರೂ ಕೂಡ ರಾಜ್ಯದಲ್ಲಿ ಮಳೆಯಾಗುತ್ತಿಲ್ಲ, ಮೂರು ದಿನ ನೋಡುತ್ತೇವೆ, ಮಳೆ ಬಾರದೇ ಇದ್ದರೆ ಮೋಡ ಬಿತ್ತನೆ ಮಾಡಲಾಗುವುದು ಎಂದು ಹೇಳಿದರು.
ಮೂರು ದಿನ ಕಾದು ನೋಡುತ್ತೇವೆ, ಮಳೆ ಆಗದಿದ್ದರೆ ಮೋಡ ಬಿತ್ತನೆ ಮಾಡುತ್ತೇವೆ. ಗುರುವಾರ ಕ್ಯಾಬಿನೆಟ್ ಸಭೆಯಿದ್ದು, ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಮಾಡಲಿದ್ದೇವೆ ಎಂದರು.ಅರಬ್ಬೀ ಸಮುದ್ರದಲ್ಲಿ ಬಿಪೋರ್ ಬಾಯ್ ಚಂಡಮಾರುತದ ಪರಿಣಾಮದಿಂದ ಮಳೆ ವಿಳಂಬವಾಗುತ್ತಿದೆ ಎನ್ನಲಾಗಿದೆ.