alex Certify ನಾವು ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸಲಿದೆ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾವು ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸಲಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿರುವ “ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ” ಕಾರ್ಯಕ್ರಮದಲ್ಲಿ  ಭಾಗವಹಿಸಿ  ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಮ್ಮಿಕೊಂಡಿದ್ದ “ಸಂವಿಧಾನ ಜಾಗೃತಿ ಜಾಥಾವು” ಒಂದು ತಿಂಗಳುಗಳ ಕಾಲ ರಾಜ್ಯಾದ್ಯಂತ ಸಂಚರಿಸಿ 5,400ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಿ, ಸಮಾಜದ ಎಲ್ಲಾ ವರ್ಗದ ಜನರು ಈ ಜಾಥಾದಲ್ಲಿ ಪಾಲ್ಗೊಳ್ಳುವಂತೆ ಮಾಡಿದೆ. ಈ ಮೂಲಕ ಸಂವಿಧಾನದ ಮಹತ್ವವನ್ನು ನಾಡಿನ ಜನತೆಗೆ ತಿಳಿಸುವಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿದೆ.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶದ ಮಹಿಳೆಯರು, ಕಾರ್ಮಿಕರು, ಶೋಷಿತ ಹಾಗೂ ದುರ್ಬಲ ವರ್ಗಗಳಿಗೆ, ಬಹುಜನರಿಗೆ ಸಂವಿಧಾನದ ಮೂಲಕ ಹೊಸ ಚೈತನ್ಯ, ಭರವಸೆ ನೀಡಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತೆ ಮಾಡಿದ್ದಾರೆ. ಶೋಷಿತ ಸಮುದಾಯಗಳ ಧ್ವನಿಯಾಗಿ ಸರ್ವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಸಮ ಸಮಾಜ ನಿರ್ಮಾಣಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಾಗಿಟ್ಟಿದ್ದಾರೆ.

ಇಂದು ದೇಶದ ಪ್ರಜಾಪ್ರಭುತ್ವ ಎದುರಿಸುತ್ತಿರುವ ಎಲ್ಲ ಸವಾಲುಗಳಿಗೆ ಬಾಬಾ ಸಾಹೇಬರು ರಚಿಸಿದ ನಮ್ಮ ಸಂವಿಧಾನದಲ್ಲಿ ಪರಿಹಾರವಿದೆ. ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ಅವರು ಹಾಕಿಕೊಟ್ಟ ಮಾರ್ಗ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತಲೇ ಇರಲಿವೆ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...