ಅರಿಶಿನವನ್ನು ಮಸಾಲೆ ಪದಾರ್ಥವೆಂದು ಪರಿಗಣಿಸುವುದಕ್ಕಿಂತ ಔಷಧಿ ಎನ್ನುವುದೇ ಸೂಕ್ತ. ಯಾಕೆಂದರೆ ಅರಿಶಿನದಲ್ಲಿ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ, ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ಅರಿಶಿನವನ್ನು ತೂಕ ಕಡಿಮೆ ಮಾಡಿಕೊಳ್ಳಲು ಸಹ ಬಳಸಬಹುದು. ಅರಿಶಿನವನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ತೂಕ ಇಳಿಸಬಹುದು. ಅರಿಶಿನದಲ್ಲಿರುವ ಪೋಷಕಾಂಶಗಳು ತೂಕವನ್ನು ಕಡಿಮೆ ಮಾಡುವಲ್ಲಿ ಪರಿಣಾಮಕಾರಿ. ಅರಿಶಿನವು ಪಾಲಿಫಿನಾಲ್‌ಗಳು, ಕರ್ಕ್ಯುಮಿನ್ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಕೊಬ್ಬನ್ನು ಕಡಿಮೆ ಮಾಡುತ್ತದೆ.
ಅರಿಶಿನ ನೀರನ್ನು ತಯಾರಿಸಲು ನೈಸರ್ಗಿಕವಾದ ಅರಿಶಿನವನ್ನು ತೆಗೆದುಕೊಳ್ಳಿ. ಅರಿಶಿನವನ್ನು 2 ಕಪ್ ನೀರಿನಲ್ಲಿ ಬೆರೆಸಿ ಕುದಿಸಿ. ನೀರು ಒಂದು ಕಪ್‌ನಷ್ಟಾಗುವವರೆಗೂ ಚೆನ್ನಾಗಿ ಕುದಿಸಬೇಕು. ಕುದಿಸಿದ ನೀರನ್ನು ಫಿಲ್ಟರ್ ಮಾಡಿ, ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿಕೊಂಡು ಕುಡಿಯಿರಿ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರನ್ನು ಕುಡಿಯುವುದರಿಂದ ತೂಕವು ಕಡಿಮೆಯಾಗಲು ಪ್ರಾರಂಭಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರನ್ನು ಕುಡಿಯುವುದರಿಂದ ಕೀಲು ನೋವು ಕಡಿಮೆಯಾಗುತ್ತದೆ. ಅರಿಶಿನದಲ್ಲಿ ಇರುವ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ವೈರಸ್ ಗುಣಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತವೆ. ಈ ನೀರನ್ನು ಕುಡಿಯುವುದರಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿ ಬರುತ್ತದೆ. ನೆಗಡಿ ಮತ್ತು ಕೆಮ್ಮಿನಂತಹ ಸಮಸ್ಯೆಗಳು ದೂರವಾಗುತ್ತವೆ.