
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುತ್ತಿರುವ ಮಾರ್ಚ್ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದ ಹತ್ತಿರ ಇರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಅಕ್ಟೋಬರ್ 5 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಸೂಚಿಸಿದೆ.
ಖಾಸಗಿಯಾಗಿ ನೊಂದಾಯಿಸಿಕೊಳ್ಳಲು ಬಯಸುವ ಅಭ್ಯರ್ಥಿಯು ಮಾರ್ಚ್ 31, 2024 ಕ್ಕೆ 17 ವರ್ಷಗಳು ತುಂಬಿರಬೇಕು. ಕರ್ನಾಟಕದಲ್ಲಿ ಎಸ್‍ಎಸ್‍ಎಲ್‍ಸಿ, ಐಸಿಎಸ್‍ಸಿ, ಎನ್‍ಐಓಎಸ್ ಗಳಲ್ಲಿ ವ್ಯಾಸಂಗ ಮಾಡಿ 2023 ರ ಜೂನ್ ಅಥವಾ ಅದಕ್ಕೂ ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಬಹುದು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಉಪನಿರ್ದೇಶಕ ಸುರೇಶ್ ಕೆ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.