ಬೆಂಗಳೂರು : ಮಾರ್ಚ್ 2024 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, 2024 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಉಲ್ಲೇಖ 04 ರಲ್ಲಿ ದಿನಾಂಕ 12-12-2023 ರವರೆಗೆ ರೂ 500+700/- ಹಾಗೂ 1320/- ರೂಗಳ ವಿಶೇಷ ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು.
ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.