
ಬೆಂಗಳೂರು : 2024 ರ ಮಾರ್ಚ್-ಏಪ್ರಿಲ್ ನಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 1 ಕ್ಕೆ ಹೊಸ ವಿದ್ಯಾರ್ಥಿಗಳ ನೋಂದಣಿಗೆ ಮತ್ತೆ ದಿನಾಂಕ ವಿಸ್ತರಿಸಲಾಗಿದೆ.
ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಪಿಯು ಪರೀಕ್ಷಾ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಲು ಡಿಸೆಂಬರ್ 1 ರವರೆಗೆ ಅವಕಾಶ ನೀಡಲಾಗಿದೆ. ಈ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನವೆಂಬರ್ 21 ರವರೆಗೆ ಸಮಯ ನೀಡಿತ್ತು. ಆದರೆ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನೋಂದಣಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ ಲೋಡ್ ಮಾಡದೆ ಇದ್ದರೆ ಅದಕ್ಕೆ ಪ್ರಾಂಶುಪಾಲರೇ ಹೊಣೆಯಾಗುತ್ತಾರೆ ಎಂದು ಮಂಡಳಿ ಹೇಳಿದೆ.