alex Certify ದ್ವಿತೀಯ ಪಿಯುಸಿ ಪರೀಕ್ಷೆ-1 : ಹೊಸ ವಿದ್ಯಾರ್ಥಿಗಳ ಮಾಹಿತಿ ಅಪ್ ಲೋಡ್ ಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ಪರೀಕ್ಷೆ-1 : ಹೊಸ ವಿದ್ಯಾರ್ಥಿಗಳ ಮಾಹಿತಿ ಅಪ್ ಲೋಡ್ ಗೆ ಸೂಚನೆ

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನ  ರಹಿತ ಪಿಯು ಕಾಲೇಜುಗಳು 224 ರ ಮಾರ್ಚ್ ನಲ್ಲಿ ನಡೆಯುವ 1 ನೇ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಂಡಿರುವ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ನವೆಂಬರ್ 21 ರೊಳಗೆ ಆನ್ ಲೈನ್ ಮೂಲಕ ಅಪ್ ಲೋಡ್ ಮಾಡುವಂತೆ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸೂಚನೆ ನೀಡಿದೆ.

ಮಾರ್ಚ್-2024 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹೊಸ (REGULAR) ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ PU EXAM PORTAL ಲಾಗಿನ್ ನಲ್ಲಿ ಅಪ್ಲೋಡ್ ಮಾಡುವ  ಬಗ್ಗೆ ಇಲಾಖೆ ಸೂಚನೆ ನೀಡಿದೆ.

ಸರ್ಕಾರದ ಆದೇಶ ಸಂಖ್ಯೆ: ಇಪಿ.203.ಎಸ್.ಎಲ್.ಬಿ. 2023 ದಿನಾಂಕ:21-09-2023 ರನ್ವಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ದ್ವಿತೀಯ ಪರೀಕ್ಷೆಗಳನ್ನು ವಾರ್ಷಿಕ ಪರೀಕ್ಷೆ-1, ವಾರ್ಷಿಕ ಪರೀಕ್ಷೆ-2 ಮತ್ತು ವಾರ್ಷಿಕ ಪರೀಕ್ಷೆ- ಎಂಬ ಹೆಸರಿನಲ್ಲಿ ನಡೆಸಲಾಗುವುದು.

ಮಾರ್ಚ್-2024 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಅರ್ಹ ಹೊಸ ವಿದ್ಯಾರ್ಥಿಗಳ (REGULAR) ನೋಂದಣಿ ಮಾಹಿತಿಗಳನ್ನು ಮಂಡಲಿಯ ಜಾಲತಾಣದ (https://kseab.karnataka.gov.in) PU EXAM PORTAL ಲಾಗಿನ್‌ನಲ್ಲಿ ಪಡೆಯಲು ಯೋಜಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜಿನ ಮಾರ್ಚ್-2024 ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ತೆಗೆದುಕೊಳ್ಳುವ ಹೊಸ ವಿದ್ಯಾರ್ಥಿಗಳ ವಿವರಗಳನ್ನು ಕಡ್ಡಾಯವಾಗಿ ಆನೈನ್ ಮೂಲಕ ಅಪ್ಲೋಡ್ ಮಾಡುವಂತೆ ಈ ಮೂಲಕ ಆದೇಶಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...