`ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2′ : ನೋಂದಣಿಗೆ ಕುರಿತಂತೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನೋಂದಣಿ ಮಾಡಲು ಆಗಸ್ಟ್ 10ರ ಇಂದು ಕೊನೆಯ ದಿನವಾಗಿತ್ತು. ಇದೀಗ ನೋಂದಣಿ ದಿನಾಂಕವನ್ನು ಆಗಸ್ಟ್ 12 ರವರೆಗೆ ವಿಸ್ತರಿಸಲಾಗಿದೆ.

2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ. ಫಲಿತಾಂಶ ತಿರಸ್ಕರಿಸಲು ಸದರಿ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ https://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಲು ತಿಳಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದೆ.

ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ಪರೀಕ್ಷೆಗಳು ಜರುಗಲಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆಗಸ್ಟ್ 12 ರೊಳಗಾಗಿ ಕಾಲೇಜು ಲಾಗಿನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸುವ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಪೂರಕ ಪರೀಕ್ಷೆ -2 ವೇಳಾಪಟ್ಟಿ
21-08-2೦23- ಸೋಮವಾರ- ಕನ್ನಡ ಹಾಗೂ ಅರೇಬಿಕ್
22-08-23- ಮಂಗಳವಾರ ಐಚ್ಛಿಕ ಕನ್ಬಡ, ರಾಸಾಯನ, ಮೂಲಗಣಿತ
23-08-23- ಬುಧವಾರ- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
24-08-23- ಗುರುವಾರ- ತರ್ಕ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯಾವಹಾರ ಅಧ್ಯಯನ
25-08-23- ಶರವಾರ- ಇತಿಹಾಸ, ಸಂಖ್ಯಾಶಾಸ್ತ್ರ
26-08-23 ಇಂಗ್ಲಿಷ್
28-08-23- ಭೂಗೋಳಶಾಸದರತ, ಮನಃ ಶಾಸ್ತ್ರ, ಭೌತಶಾಸ್ತ್ರ
29-08-23- ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ಶಾಸ್ತ್ರ
30-08-23 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
21-08-23- ಹಿಂದಿ
01-09-2023 – ಅರ್ಥ ಶಾಸ್ತ್ರ, ಜೀವಶಾಸ್ತ್

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read