alex Certify ಇಂದಿನಿಂದ `ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ ಶುರು : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ `ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ’ ಶುರು : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಆಗಸ್ಟ್ 21 ರ ಇಂದಿನಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು, ಪರೀಕ್ಷೆಗೆ ಇಲಾಖೆ ಈಗಾಗಲೇ ಸಿದ್ದತಾ ಕ್ರಮ ಕೈಗೊಂಡಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

1) ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.
2) ಬ್ಲೂಟೂತ್ ಡಿವೈಸ್, ವಾಚ್. ಎಲೆಕ್ಟ್ರಾನಿಕ್ ಕ್ಯಾಲುಕೇಟರ್ ಗೆ ನಿರ್ಬಂಧ ವಿಧಿಸಲಾಗಿದ್ದು, ಸಾಮಾನ್ಯ ಕ್ಯಾಲುಕೇಟರ್ ಗೆ ಮಾತ್ರ ಅನುಮತಿ ನೀಡಲಾಗಿದೆ.
3) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ

ಪೂರಕ ಪರೀಕ್ಷೆ -2 ವೇಳಾಪಟ್ಟಿ

21-08-2೦23- ಸೋಮವಾರ- ಕನ್ನಡ ಹಾಗೂ ಅರೇಬಿಕ್
22-08-23- ಮಂಗಳವಾರ ಐಚ್ಛಿಕ ಕನ್ಬಡ, ರಾಸಾಯನ, ಮೂಲಗಣಿತ
23-08-23- ಬುಧವಾರ- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
24-08-23- ಗುರುವಾರ- ತರ್ಕ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯಾವಹಾರ ಅಧ್ಯಯನ
25-08-23- ಶರವಾರ- ಇತಿಹಾಸ, ಸಂಖ್ಯಾಶಾಸ್ತ್ರ
26-08-23 ಇಂಗ್ಲಿಷ್
28-08-23- ಭೂಗೋಳಶಾಸದರತ, ಮನಃ ಶಾಸ್ತ್ರ, ಭೌತಶಾಸ್ತ್ರ
29-08-23- ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ಶಾಸ್ತ್ರ
30-08-23 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
21-08-23- ಹಿಂದಿ
01-09-2023 – ಅರ್ಥ ಶಾಸ್ತ್ರ, ಜೀವಶಾಸ್ತ್ರ

KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ-2 ಜರುಗಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.ಕ.ರಾ.ರ.ಸಾ.ನಿಗಮವು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...