ಬೆಂಗಳೂರಿನಲ್ಲಿ ಜೂನ್ ವೇಳೆಗೆ 33 ಲಕ್ಷ ಕೊರೋನಾ ಕೇಸ್ ಪತ್ತೆಯಾಗಬಹುದು ಎಂದು ಐ.ಐ.ಎಸ್.ಸಿ.(ಭಾರತೀಯ ವಿಜ್ಞಾನ ಸಂಸ್ಥೆ) ಮಾಹಿತಿ ನೀಡಿದೆ.
ರಾಜ್ಯದಲ್ಲಿ ಬುಧವಾರ ದಾಖಲೆಯ 50 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲಿ 23,106 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೇ 12 ರ ನಂತರವೂ ಲಾಕ್ ಡೌನ್ ಮುಂದುವರೆಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಭಾರತೀಯ ವಿಜ್ಞಾನ ಸಂಸ್ಥೆ ಕೂಡ ಲಾಕ್ಡೌನ್ ಬಗ್ಗೆ ಪ್ರಸ್ತಾಪಿಸಿದ್ದು, ಸಂಪೂರ್ಣ ಲಾಕ್ಡೌನ್ ಮಾಡದಿದ್ದರೆ ಜೂನ್ ತಿಂಗಳ ವೇಳೆಗೆ ಬೆಂಗಳೂರಿನಲ್ಲಿ 33 ಲಕ್ಷ ಹೊಸ ಕೇಸುಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಈಗಾಗಲೇ ರೋಗಿಗಳಿಗೆ ಅಗತ್ಯವಾದ ಬೆಡ್, ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ಇದ್ದು, ಇನ್ನೂ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಮತ್ತಷ್ಟು ಜೀವಹಾನಿಯಾಗುವ ಸಾಧ್ಯತೆ ಇದೆ. ಸದ್ಯದ ಕೋವಿಡ್ ಸಂಖ್ಯೆಯ ಅಂಕಿ ಅಂಶ ಆದರಿಸಿ ಭಾರತೀಯ ವಿಜ್ಞಾನ ಸಂಸ್ಥೆ ಅಧ್ಯಯನ ವರದಿ ನೀಡಿದ್ದು, ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿ ಮಾಡದಿದ್ದರೆ ಜೂನ್ ವೇಳೆಗೆ 33 ಲಕ್ಷ ಕೇಸ್ ಗಳು ದಾಖಲಾಗಬಹುದು, 24,174 ಮಂದಿ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಅಂದಾಜಿಸಿದೆ.