alex Certify IIT ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IIT ಕ್ಯಾಂಪಸ್ ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ

ಹೈದರಾಬಾದ್: ಐಐಟಿಯ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಒಂದು ವರ್ಷದಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ.

ಮಮಿತಾ ನಾಯಕ್ (21) ಆತ್ಮಹತ್ಯೆಗೆ ಶರಣಾದವಳು. ಓಡಿಶಾ ಮೂಲದ ಮಮಿತಾ ಎಂ.ಟೆಕ್ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದು, ಕಳೆದ ತಿಂಗಳಷ್ಟೇ ಐಐಟಿಗೆ ಸೇರಿದ್ದಲು.

ಹಾಸ್ಟೇಲ್ ರೂಮಿನಲ್ಲಿಯೇ ಮಮಿತಾ ಶವವಾಗಿ ಪತ್ತೆಯಾಗಿದ್ದು, ಆಕೆಯ ಸಹಪಾಠಿಗಳು ಈ ವಿಚಾರವನ್ನು ಹಾಸ್ಟೇಲ್ ನಿರ್ವಾಹಕರಿಗೆ ತಿಳಿಸಿದ್ದಾರೆ. ಮಮಿತಾ, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಮಾನಸಿಕ ಒತ್ತಡದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದಾಳೆ. ನನ್ನ ಸಾವಿಗೆ ನಾನೇ ಕಾರಣ ಯಾರ ಒತ್ತಡವೂ ನನ್ನ ಮೇಲಿಲ್ಲ ಎಂದು ಉಲ್ಲೇಖಿಸಿದ್ದಾಳೆ.

ಸಂಗಾರೆಡ್ಡಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...