
ಪಾಟ್ನಾದ ಬಿಹ್ತಾದಲ್ಲಿರುವ ಕ್ಯಾಂಪಸ್‌ನಲ್ಲಿರುವ ಕಟ್ಟಡದ ಛಾವಣಿಯಿಂದ ಹಾರಿ ಮಂಗಳವಾರ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯಲ್ಲಿ ಮೂರನೇ ವರ್ಷದ ಬಿ.ಟೆಕ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಮಾಹಿತಿ ಪಡೆದ ನಂತರ ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಈ ಬಗ್ಗೆ ತನಿಖೆ ಆರಂಭಿಸಿದೆ.
ದಾನಾಪುರ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ(ಎಸ್‌ಡಿಪಿಒ) II ಪಂಕಜ್ ಕುಮಾರ್ ಮಿಶ್ರಾ, ಐಐಟಿ ಕ್ಯಾಂಪಸ್‌ನೊಳಗೆ ವಿದ್ಯಾರ್ಥಿಯೊಬ್ಬರು ಛಾವಣಿಯಿಂದ ಹಾರಿದ್ದಾರೆ ಎಂದು ನಮಗೆ ಮಾಹಿತಿ ಬಂದಿದ್ದು, ತಂಡವು ತಕ್ಷಣ ಸ್ಥಳಕ್ಕೆ ತೆರಳಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿ ತೆಲಂಗಾಣ ಮೂಲದವರಾಗಿದ್ದು, ಬಿ.ಟೆಕ್‌ನ ಮೂರನೇ ವರ್ಷದಲ್ಲಿದ್ದರು. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣವೆಂದು ತೋರುತ್ತದೆ, ಆದರೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಎಫ್‌ಎಸ್‌ಎಲ್ ತಂಡವು ಘಟನಾ ಸ್ಥಳದಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿದೆ ಮತ್ತು ಕೆಲವು ವಾಟ್ಸಾಪ್ ಚಾಟ್‌ಗಳ ಪರಿಶೀಲನೆ ಸಹ ಪ್ರವೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
#WATCH | Bihar | A student died by suicide after allegedly jumping from the roof of a building in IIT Patna campus located in Amhara, Bihta, Patna pic.twitter.com/3U1zvu0Z2Z
— ANI (@ANI) February 25, 2025