ನವದೆಹಲಿ: ಮುಂದಿನ ವರ್ಷದಿಂದ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮಾತೃಭಾಷೆಯಲ್ಲಿ ನೀಡಲಾಗುವುದು. ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಮತ್ತು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಗಳಲ್ಲಿ ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
ಇದು ಈ ವರ್ಷ ಕೇಂದ್ರ ಸರ್ಕಾರ ಅಂಗೀಕರಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಗುರುವಾರ ತಿಳಿಸಿದೆ.
ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣವನ್ನು ನೀಡುವುದು ಕೇಂದ್ರ ಸರ್ಕಾರ ಅಂಗೀಕರಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದ್ದು, ಮುಂದಿನ ವರ್ಷದಿಂದ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮಾತೃಭಾಷೆಯಲ್ಲಿ ನೀಡಲಾಗುವುದು.
ಕೇಂದ್ರ ಶಿಕ್ಷಣ ಸಚಿವ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಸರ್ಕಾರದ ವಿವಿಧ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸಲು ಸಹಾಯವಾಣಿ ಆರಂಭಿಸಲು ಯುಜಿಸಿಗೆ ನಿರ್ದೇಶನ ನೀಡಿದ್ದು, ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಕೂಡಲೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ವಿಶೇಷವಾಗಿ ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡುವ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲು, ಕೆಲವು ಐಐಟಿಗಳು ಮತ್ತು ಎನ್ಇಟಿ ಗಳನ್ನು ಒಂದೇ ಪಟ್ಟಿಗೆ ಸೇರಿಸಲು ಸೂಚಿಸಿದ್ದಾರೆ.
ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಮತ್ತು ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಬದಲಾವಣೆ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.