ಜಲಂಧರ್: ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿಯನ್ನು ಜಾರಿ ನಿರ್ದೇಶನಾಲಯ ತಡರಾತ್ರಿ ಬಂಧಿಸಿದೆ.
ಜಲಂಧರ್ ಸಿವಿಲ್ ಆಸ್ಪತ್ರೆಯಲ್ಲಿ ಭೂಪಿಂದರ್ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಜಲಂಧರ್ ಇಡಿ ಕಚೇರಿಯಲ್ಲಿರುವ ಅವರನ್ನು ಮೊಹಾಲಿಯಲ್ಲಿರುವ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಫೆಬ್ರವರಿ 20 ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ.
ಜನವರಿಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ದಾಳಿಗಳನ್ನು ಪೂರ್ಣಗೊಳಿಸಿದ ನಂತರ, ಜಾರಿ ನಿರ್ದೇಶನಾಲಯ(ಇಡಿ) ಭೂಪಿಂದರ್ ಸಿಂಗ್ ಹನಿ ಅವರ ಸಹಚರರ ನಿವಾಸದಿಂದ 10 ಕೋಟಿ ರೂಪಾಯಿ ನಗದು, 21 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು 12 ಲಕ್ಷ ರೂಪಾಯಿ ಮೌಲ್ಯದ ರೋಲೆಕ್ಸ್ ವಾಚ್ ಅನ್ನು ವಶಪಡಿಸಿಕೊಂಡಿದೆ ಎಂದು ಘೋಷಿಸಿತ್ತು.