ಬೆಂಗಳೂರು : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂಕೋರ್ಟ್ ’ ನಿರಾಕರಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ನಿರಾಕರಿಸಿದ ಹಿನ್ನೆಲೆ ಜಮೀರ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ನಂತರ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಆಗಲ್ಲ ಎಂದಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯ ಮುಂದುವರಿಕೆಗೆ ಆದೇಶಿಸಿದೆ.
80.44 ಕೋಟಿ ಆದಾಯ ಮೀರಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಮೀರ್ ವಿರುದ್ಧ ಎಸಿಬಿ ಕೇಸ್ ದಾಖಲಿಸಿತ್ತು. 80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣ ರದ್ದುಗೊಳಿಸುವಂತೆ ಜಮೀರ್ ಅಹ್ಮದ್ ಅರ್ಜಿ ಸಲ್ಲಿಸಿದ್ದರು.ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್ಐಆರ್ ದಾಖಲಿಸಿತ್ತು.