alex Certify ಪ್ರವಾಸೋದ್ಯಮ ಇಲಾಖೆ ಹಣವೂ ಅಕ್ರಮ ವರ್ಗಾವಣೆ: ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸೋದ್ಯಮ ಇಲಾಖೆ ಹಣವೂ ಅಕ್ರಮ ವರ್ಗಾವಣೆ: ಎಫ್ಐಆರ್ ದಾಖಲು

ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ. ಐಡಿಬಿಐ ಬ್ಯಾಂಕ್ ಖಾತೆಯ ಮೂಲಕ ವಿವಿಧ ಖಾತೆಗಳಿಗೆ 2.47 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಹಣವನ್ನು ವಿವಿಧ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದ್ದು, ಈ ಬಗ್ಗೆ ಬಾಗಲಕೋಟೆಯ ಸಿಇಎನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಜುಲೈ 10ರಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಗೋಪಾಲ ಹಿತ್ತಲಮನೆ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹೆಸರಲ್ಲಿ ಖಾತೆ ಐಡಿಬಿಐ ಬ್ಯಾಂಕ್ ನಲ್ಲಿ ಮೂರು ಖಾತೆ ತೆರೆದು ಅಕ್ರಮವಾಗಿ ಈ ಮೂರು ಬ್ಯಾಂಕ್ ಖಾತೆಯಿಂದ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪ ಕೇಳಿ ಬಂದಿದೆ. ಅಕ್ರಮವಾಗಿ ಹಣ ತೆಗೆದುಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...