alex Certify BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ‘CBI’ ತನಿಖೆಗೆ ಹೈಕೋರ್ಟ್ ಅಸ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಕ್ರಮ ಆಸ್ತಿ ಗಳಿಕೆ ಕೇಸ್ : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ‘CBI’ ತನಿಖೆಗೆ ಹೈಕೋರ್ಟ್ ಅಸ್ತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದ್ದು, 3 ತಿಂಗಳಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

ತನಿಖೆಗೆ ತಡೆ ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಡಿಕೆಶಿ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅನುಮತಿ ನೀಡಿದೆ.ಮುಂದಿನ ಮೂರು ತಿಂಗಳವೊಳಗೆ ಪ್ರಕರಣದ ತನಿಖೆಯನ್ನು ಮುಗಿಸಬೇಕು ಎಂದು ಸಿಬಿಐಗೆ ಸೂಚನೆ ನೀಡಿದೆ. ತನಿಖೆ ನಿಧಾವಾದರೆ ಮತ್ತೆ ಪುನಃ ಆದೇಶ ನೀಡಬೇಕಾಗುತ್ತದೆ ಎಂದು  ನ್ಯಾಯಪೀಠ ಅಭಿಪ್ರಾಯಪಟ್ಟಿದೆ.ಪ್ರ ಕರಣದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದೆ ಮತ್ತು ತನಿಖೆಯನ್ನು ಪೂರ್ಣಗೊಳಿಸಲು ಮತ್ತು ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಲು ಸಿಬಿಐಗೆ ಮೂರು ತಿಂಗಳ ಗಡುವನ್ನು ನಿಗದಿಪಡಿಸಿದೆ.

ಡಿಕೆ ಶಿವಕುಮಾರ್ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
2014- 2018ರ ಸಮಯದಲ್ಲಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಡಿಕೆಶಿ ವಿರುದ್ಧ ಸಿಬಿಐ ಕೇಸ್ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿಕೆಶಿ ಸಿಬಿಐ ತನಿಖೆ ರದ್ದು ಕೋರಿದ್ದರು.

ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆಪಾದನೆ ಸಂಬಂಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಏಪ್ರಿಲ್ನಲ್ಲಿ ಪೂರ್ಣಗೊಂಡಿತ್ತು. ಕರ್ನಾಟಕ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...