
ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲ್ಲನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಕಳ್ಳತನ ಆರೋಪದಲ್ಲಿ ಸ್ಟೇಷನ್ ಮಾಸ್ಟರ್ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೆಪಿಟಿಸಿಎಲ್ ತನಿಖಾ ಸಮಿತಿ ಪರಿಶೀಲನೆ ವೇಳೆ ಕಲ್ಲಿದ್ದಲು ಕಳ್ಳತನ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಯರಮರಸ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಹಾಗೂ ಗುತ್ತಿಗೆದಾರ ಶ್ರೀನಿವಾಸಲು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಯರಮರಸ್ ವಿದ್ಯುತ್ ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಕಲ್ಲಿದ್ದಲು ಕಳ್ಳತನದ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್.ಟಿ.ಪಿ.ಎಸ್ ಹಾಗೂ ವೈಟಿಪಿ ಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡುವ ಕಲ್ಲಿದ್ದಲು ಸಂಗ್ರಹ ಜಾಗಕ್ಕೆ ತೆರಳಿ ಅಧಿಕಾರಿಗಳು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿತ್ತು. ಗುತ್ತಿಗೆದಾರನನ್ನು ವಿಚಾರಣೆ ನಡೆಸಿದಾಗ ಆರೋಪಿ ಕಲ್ಲಿದ್ದಲು ಬೇರೆಡೆ ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.