alex Certify CM ಆದೇಶಕ್ಕೆ ಜಿಲ್ಲಾಧಿಕಾರಿಗಳ ತಕ್ಷಣದ ಸ್ಪಂದನೆ; ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CM ಆದೇಶಕ್ಕೆ ಜಿಲ್ಲಾಧಿಕಾರಿಗಳ ತಕ್ಷಣದ ಸ್ಪಂದನೆ; ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ವ್ಯವಸ್ಥೆ

ಸಾರ್ವಜನಿಕ ದೂರು ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ ಆದೇಶಕ್ಕೆ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಕ್ಷಣ ಸ್ಪಂದಿಸಿದ್ದು, ಸಾರ್ವಜನಿಕರ ಸಂಚಾರ ಮತ್ತು ದೂರುಗಳಿಗೆ ಆಸ್ಪದವಾಗದಂತೆ ಅವಳಿನಗರದ ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಜಾಗ ಮತ್ತು ಅಗತ್ಯ ವ್ಯವಸ್ಥೆ ಕಲ್ಪಿಸಲು ತಕ್ಷಣ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರಿಗೆ ಇಂದು ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅವಳಿನಗರದಲ್ಲಿ 2018-19 ರಲ್ಲಿ ನಡೆಸಿದ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆಯಲ್ಲಿ 6172 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿತ್ತು. ಅವರಿಗೆ ನಿಯಮದ ಪ್ರಕಾರ ಗುರುತಿನ ಚೀಟಿ ಸಹ ನೀಡಲಾಗಿದೆ. 2014 ರ ಬೀದಿ ಬದಿ ವ್ಯಾಪಾರಸ್ಥರ ಕಾಯ್ದೆ ಹಾಗೂ 2019 ರ ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಸ್ಥರ ನಿಯಮ ಅನುಸಾರ ಬೀದಿ ಬದಿ ವ್ಯಾಪಾರಸ್ಥರ ಸಮಿತಿ ಅಸ್ತಿತ್ವದಲ್ಲಿದೆ. ಮಹಾನಗರಪಾಲಿಕೆ ಹಾಗೂ ಪೊಲೀಸ ಇಲಾಖೆಯ ಸಮನ್ವಯದಲ್ಲಿ ಧಾರವಾಡದಲ್ಲಿ 7 ಮತ್ತು ಹುಬ್ಬಳ್ಳಿಯಲ್ಲಿ 33 ಸೇರಿದಂತೆ ಬೀದಿ ಬದಿ ವ್ಯಾಪಾರಿಗಳಿಗಾಗಿ ಒಟ್ಟು 40 ವ್ಯಾಪರ ವಲಯಗಳನ್ನು ಗುರುತಿಸಲಾಗಿದೆ. ಅಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅಗತ್ಯ ಅನುಕೂಲ ಕಲ್ಪಿಸಲು ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ ಕಾಯ್ದೆ ಪ್ರಕಾರ ಸೌಲಭ್ಯ ಕಲ್ಪಸಲಾಗುತ್ತದೆ. ಕಿಮ್ಸ್ ಆಸ್ಪತ್ರೆ ಹಿಂಭಾಗ ಮತ್ತು ಆಸ್ಪತ್ರೆ ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಆಗಿದ್ದ ಕೆಲವು ಡಬ್ಬಾ ಅಂಗಡಿಗಳನ್ನು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ತೆರವುಗೊಳಿಸಲಾಗಿದ್ದು, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಆಯುಕ್ತರಿಗೆ ತಿಳಿಸಲಾಗಿದೆ. ಮತ್ತು ಶೀಘ್ರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮತಿ ಸಭೆ ಕರೆದು, ಅವರ ಸಮಸ್ಯೆ, ಸೌಲಭ್ಯಗಳ ಕುರಿತು ಸಭೆ ಜರುಗಿಸಿ, ವರದಿ ನೀಡಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...