ಮಡಿಕೇರಿ: ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಹೋಮಿಯೋಪತಿ ಇಮ್ಯೂನ್ ಬೂಸ್ಟರ್ ಗಳನ್ನು ಏಪ್ರಿಲ್ 28 ರಿಂದ ಜಿಲ್ಲೆಯಾದ್ಯಂತ ನೀಡಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಹೋಮಿಯೋಪತಿ ಘಟಕ, ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಬಲ್ಲಮಾವಟಿ, ಅರಪಟ್ಟು, ಕರಿಕೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಪಾರಾಣೆ ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯಗಳಲ್ಲಿ ಲಭ್ಯವಿದೆ.
ಸೋಮವಾರಪೇಟೆಯ ಸರ್ಕಾರಿ ಹೋಮಿಯೋಪತಿ ಮತ್ತು ಆಯುರ್ವೇದ ಆಸ್ಪತ್ರೆ, ಕುಶಾಲನಗರದ ಸರ್ಕಾರಿ ಆಯುರ್ವೇದ ಮತ್ತು ಹೋಮಿಯೋಪತಿ ಆಸ್ಪತ್ರೆ, ಬೆಸೂರು ಮತ್ತು ತೊರೆನೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಹಾಗೂ ವಿರಾಜಪೇಟೆ ತಾಲೂಕಿನ ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಶ್ರೀಮಂಗಲದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಲ್ಲಿ ಲಭ್ಯವಿದ್ದು, ಸಾರ್ವಜನಿಕರು ಉಪಯೋಗ ಪಡೆದುಕೊಳ್ಳುವಂತೆ ಕೋರಿದೆ.
ಕೊರೊನಾ ಸಂದರ್ಭದಲ್ಲಿ ಮನೆಯಿಂದ ಒಬ್ಬರು ಸದಸ್ಯರು ಆಧಾರ್ ಕಾರ್ಡ್‍ನೊಂದಿಗೆ ಬೆಳಗ್ಗೆ 10 ರಿಂದ 1 ಗಂಟೆಯ ಒಳಗೆ ಪಡೆದುಕೊಳ್ಳುವಂತೆ ಜಿಲ್ಲಾ ಆಯುಷ್ ಅಧಿಕಾರಿ ತಿಳಿಸಿದ್ದಾರೆ.