ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಚಿಸಿದ್ದು, ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ.
ಜನವರಿ 25ರಂದು ರಾಜ್ಯ ಸರ್ಕಾರ ರಾಜ್ಯಮಟ್ಟದ ಗ್ಯಾರಂಟಿಗಳ ಅನುಷ್ಠಾನ ಪ್ರಾಧಿಕಾರ ಮತ್ತು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯಮಟ್ಟದ ಪ್ರಾಧಿಕಾರಕ್ಕೆ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಆದೇಶ ಹೊರಬೀಳುವುದಷ್ಟೇ ಬಾಕಿ ಇದೆ. ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ಈ ಹುದ್ದೆ ಹೊಂದಿದೆ. ಪ್ರಾಧಿಕಾರದ ಉಪಾಧ್ಯಕ್ಷ ಹುದ್ದೆಗೆ ಮೆಹರೋಜ್ ಖಾನ್, ಪುಷ್ಪಾ ಅಮರನಾಥ್, ಎಸ್.ಆರ್. ಪಾಟೀಲ್, ಸೂರಜ್ ಹೆಗಡೆ ಅವರ ನೇಮಕಾತಿಗೆ ಸಿಎಂ ಅನುಮೋದನೆ ನೀಡಿದ್ದಾರೆ.