ಬೆಂಗಳೂರು : ಆಗಸ್ಟ್ 16 ರಂದು ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಗಸ್ಟ್ 16 ರಂದು ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿದೆ, ಈಗಾಗಲೇ ಫಲಾನುಭವುಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂದರು. ಕಾಂಗ್ರೆಸ್ ನೀಡಿದ ಭರವಸೆಯಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಈಡೇರಿಸಲಿದೆ. ಎಷ್ಟೇ ಕಷ್ಟ ಆದರೂ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮನೆ ಒಡತಿಯರಿಗೆ ತಿಂಗಳಿಗೆ 2000 ರೂ ನೀಡುವ ಯೋಜನೆ ಇದಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ರಾಜ್ಯದಲ್ಲಿ ಖಾಲಿ ಇರುವ ಐದೂವರೆ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ 5 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಹಾಸನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎ ಸಿದ್ದರಾಮಯ್ಯ ವಿವಿಧ ಇಲಾಖೆಗಳಲ್ಲಿನ 5 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಆರು ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದರು. 40% ಕಮಿಷನ್ ಆರೋಪ , ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್ ಅವ್ಯವಹಾರ, ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಕೂಡ ಮರು ತನಿಖೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೀಘ್ರದಲ್ಲಿಯೇ ಆರು ಹಗರಣಗಳನ್ನು ಎಸ್ಐಟಿಗೆ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆ ಗೋಲ್ಮಾಲ್, PSI ನೇಮಕಾತಿ ಹಗರಣ, ಕೋವಿಡ್ ಸಲಕರಣೆ ಖರೀದಿ ಹಗರಣ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ, BDA, BBMP ಅಕ್ರಮಗಳು ಸೇರಿ ಶೀಘ್ರದಲ್ಲಿಯೇ ಆರು ಹಗರಣಗಳನ್ನು ಎಸ್ಐಟಿಗೆ ನೀಡಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.