alex Certify ಆಯೋಗದಿಂದ ವರದಿ ಬಂದ ತಕ್ಷಣ ರಾಜ್ಯದಲ್ಲಿ ‘ಒಳಮೀಸಲಾತಿ’ ಜಾರಿ : CM ಸಿದ್ದರಾಮಯ್ಯ ಸ್ಪಷ್ಟನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯೋಗದಿಂದ ವರದಿ ಬಂದ ತಕ್ಷಣ ರಾಜ್ಯದಲ್ಲಿ ‘ಒಳಮೀಸಲಾತಿ’ ಜಾರಿ : CM ಸಿದ್ದರಾಮಯ್ಯ ಸ್ಪಷ್ಟನೆ.!

ಬೆಂಗಳೂರು : ಆಯೋಗದಿಂದ ವರದಿ ಬಂದ ತಕ್ಷಣ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದರು.

“ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗದಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.

https://twitter.com/siddaramaiah/status/1851985021030273227

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...