ಬೆಂಗಳೂರು : ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಂತರ್ಜಲ ವೃದ್ಧಿ ಮತ್ತು ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೃಷಿ ಚಟುವಟಿಕೆ ಕೈಗೊಳ್ಳಲು ಅನುಕೂಲ ಕಲ್ಪಿಸುವ ಕೃಷಿಭಾಗ್ಯ ಯೋಜನೆಯನ್ನು ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯದಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಪಂಪ್ ಸೆಟ್ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಮಾಡಿಕೊಡಲಾಗುತ್ತದೆ. ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿನೀಡಿ ಅರ್ಜಿ ಸಲ್ಲಿಸಿ, ಯೋಜನೆಯ ಗರಿಷ್ಠ ಉಪಯೋಗ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಕೆ
ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವುದು.
ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಹಾಗೂ ಹೋಬಳಿಗೆ ನಿಗದಿಪಡಿಸಿದ ಗುರಿಗಳನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು.
ರೈತರು ಸಲ್ಲಿಸಬೇಕಾದ ದಾಖಲೆಗಳು
* ರೈತರ ಅರ್ಜಿ
* ರೈತರ ಭಾವಚಿತ್ರ
• FID (FID ಇಲ್ಲವಾದಲ್ಲಿ ಆಧಾರ್ ಪ್ರತಿ, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ)