ಬೆಂಗಳೂರು : ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸಾ ದರಪಟ್ಟಿ ಅಳವಡಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಹಾಕದೇ ರೋಗಿಗಳಿಂದ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ದೂರುಗಳು ಬಂದಿರುವ ಹಿನ್ನೆಲೆ ಆರೋಗ್ಯ ಇಲಾಖೆ ಆಸ್ಪತ್ರೆಗಳಿಗೆ ಚಾಟಿ ಬೀಸಿದೆ. ಒಂದು ವೇಳೆ ನಿಯಮ ಪಾಲಿಸದೇ ಇದ್ರೆ ಆಸ್ಪತ್ರೆಗಳನ್ನು ಸೀಜ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಿಎಂ, ಡಿಸಿಎಂಗೆ ದೂರುಗಳು ಬಂದ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.