ಮೈಸೂರು : ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ಇದೀಗ ಯುವನಿಧಿ ಯೋಜನೆ ಜಾರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಹೇಳಿದರು.
ಅದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದುವರೆಗೆ 1.6 ಕೋಟಿ ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಸಮಯ ಮಿತಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಏನಿದು ಯುವನಿಧಿ
ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ.