ಬೆಂಗಳೂರು: 2,100 ಕೋಟಿ ರೂ. ಖರ್ಚು ಮಾಡಿ ವೃಷಭಾವತಿ ಯೋಜನೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನಾವು ಜನರನ್ನು ದೇವರು – ಧರ್ಮದ ಹೆಸರಲ್ಲಿ ಮರುಳು ಮಾಡಿ ಅಧಿಕಾರ ನಡೆಸುವುದಿಲ್ಲ. ಅನ್ನ – ಆರೋಗ್ಯ – ಅಕ್ಷರ – ಸೂರು – ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ.
ಹಿಂದಿನ ಅವಧಿಯಲ್ಲಿ 3 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆ ಜಾರಿ ಮಾಡಿದ್ದೆವು. ಈಗ ವೃಷಭಾವತಿ ಯೋಜನೆಯನ್ನು 2,100 ಕೋಟಿ ರೂ. ಖರ್ಚು ಮಾಡಿ ಜಾರಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಈ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ, ಆ ಮೂಲಕ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಜೀವಕಳೆ ಬರಲಿದೆ ಬರಲಿದೆ.