ಬೆಂಗಳೂರು : ಅಪಘಾತದಂತಹ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಹೆದ್ದಾರಿಗಳಲ್ಲಿ ಮತ್ತು ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ₹45 ಕೋಟಿ ವೆಚ್ಚದಲ್ಲಿ ಟ್ರಾಮಾ ಸೆಂಟರ್ಗಳನ್ನು ಆರಂಭಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಲ್ಲಿಗೆ ಬೇಕಾದ ಎಲ್ಲ ಉಪಕರಣಗಳನ್ನು ಅಳವಡಿಸಲಾಗುತ್ತಿದೆ. 10 ರಿಂದ 15 ಜಿಲ್ಲಾ ಆಸ್ಪತ್ರೆಗಳಲ್ಲಿ ಟ್ರಾಮಾ ಸೆಂಟರ್ ಆರಂಭಿಸುವ ಉದ್ದೇಶ ಇರಿಸಿಕೊಳ್ಳಲಾಗಿದೆ. ಹೆದ್ದಾರಿಗಳಲ್ಲಿ ಅಪಘಾತವಾದವರನ್ನು ತಕ್ಷಣ ಆಸ್ಪತ್ರೆಗೆ ಕರೆತರಲು ಆಂಬುಲೆನ್ಸ್ಗಳನ್ನು ಒದಗಿಸಲಾಗುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ಬರಲು ಆಂಬುಲೆನ್ಸ್ ಗೆ ತೊಂದರೆಯಾಗಿದ್ದಲ್ಲಿ ನಿವಾರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.