ಬೆಂಗಳೂರು : ಕುಡಿಯುವ ನೀರಿನ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಮಹತ್ವ ಕ್ರಮ ಕೈಗೊಂಡಿದ್ದು, 24 ಗಂಟೆ ನೀರು ಪೂರೈಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿರುವ ಅವರು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಂಜಾಗರೂಕತೆ ಕ್ರಮ ತೆಗೆದುಕೊಳ್ಳಲಾಗಿದೆ. ಸಮಸ್ಯಾತ್ಮಕ ಗ್ರಾಮಗಳು ಹಾಗೂ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ 24 ಗಂಟೆ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ಬೋರ್ ವೆಲ್ ಬಾಡಿಗೆಗೆ ಪಡೆಯಲು, ಹೊಸ ಬೋರ್ ವೆಲ್ ಕೊರೆಯಲು ಹಾಗೂ ಪೈಪ್ ಲೈನ್ ದುರಸ್ತಿಗೆ ಆದೇಶ ನೀಡಲಾಗಿದೆ. ಈಗಾಗಲೇ 3,670 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯಲು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.