ಬೆಂಗಳೂರು : ಸ್ಯಾಂಡಲ್ ವುಡ್ ‘ಪ್ರಚಂಡ ಕುಳ್ಳ’ ಎಂದೇ ಪ್ರಖ್ಯಾತಿ ಪಡೆದಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (81) ನಿಧನರಾಗಿದ್ದಾರೆ.ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ದ್ವಾರಕೀಶ್ ಜನನ
ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಇವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು.
ಶಾರದಾ ವಿಲಾಸ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.
ನಟನೆಯಲ್ಲಿ ಬಹಳ ಆಸಕ್ತಿ ಹೊಂದಿದ್ದ ದ್ವಾರಕೀಶ್ ೧೯೬೩ರಲ್ಲಿ. ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ದ್ವಾರಕೀಶ್ ಅವರು, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಇದುವರೆಗೆ 100 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಹಲವು ನಟರನ್ನು ಬೆಳಕಿಗೆ ತಂದ ನಿರ್ಮಾಪಕ
ದ್ವಾರಕೀಶ್ ಚಿತ್ರ ಅನ್ನುವ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿ ಅದರಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಇವರು ನಿರ್ಮಾಣ ಮಾಡಿದ ಸಿನಿಮಾಗಳು ಇಂದು ಸೂಪರ್ ಹಿಟ್ ಆಗಿದೆ. ಹಲವು ನಟರನ್ನು ಸ್ಟಾರ್ ನಟರನ್ನಾಗಿ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ನಿರ್ದೇಶನ
1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. . ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ ಹಲವು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ನಟರಾಗಿ ದ್ವಾರಕೀಶ್ ಅಭಿನಯಿಸಿದ ಸಿನಿಮಾಗಳು
• ಮಂಕುತಿಮ್ಮ
• ಪೆದ್ದ ಗೆದ್ದ
• ಕಿಟ್ಟು ಪುಟ್ಟು
• ಸಿಂಗಾಪುರದಲ್ಲಿ ರಾಜಾಕುಳ್ಳ
• ಮನೆ ಮನೆ ಕಥೆ
• ಆಫ್ರಿಕಾದಲ್ಲಿ ಶೀಲಾ
• ಆಪ್ತಮಿತ್ರ
• ಭಲೇ ಹುಡುಗ
• ಬಂಗಾರದ ಮನುಷ್ಯ
• ಗಲಾಟೆ ಸಂಸಾರ
• ಪ್ರಚಂಡ ಕುಳ್ಳ
• ಆಪ್ತಮಿತ್ರ
• ಗುರುಶಿಷ್ಯರು
• ವಿಷ್ಣುವರ್ಧನ
• ಕಳ್ಳ ಕುಳ್ಳ
• ಮುದ್ದಿನ ಮಾವ
• ರಾಯರು ಬಂದರು ಮಾವನ ಮನೆಗೆ
• ಆಟಗಾರ
• ಚೌಕ
• ಪ್ರೀತಿ ಮಾಡು ತಮಾಷೆ ನೋಡು