alex Certify ಭೋವಿ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೋವಿ ಸಮುದಾಯಕ್ಕೆ ಮುಖ್ಯ ಮಾಹಿತಿ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ನಂ.29/19 ರಾಜಾಜಿನಗರ, 1 ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್ ಹತ್ತಿರ, ಬೆಂಗಳೂರು-10 ಅಥವಾ ದೂರವಾಣಿ ಸಂಖ್ಯೆ: 080-23421533 ಅನ್ನು ಸಂಪರ್ಕಿಸಬಹುದು.
ಆಸಕ್ತರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 15 ರೊಳಗೆ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...