alex Certify ರಾಜ್ಯದ ರೈತರ ಮಕ್ಕಳಿಗೆ ಮುಖ್ಯ ಮಾಹಿತಿ : ‘ಕೃಷಿ ಡಿಪ್ಲೊಮಾ’ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರ ಮಕ್ಕಳಿಗೆ ಮುಖ್ಯ ಮಾಹಿತಿ : ‘ಕೃಷಿ ಡಿಪ್ಲೊಮಾ’ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 14 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 14 ರೊಳಗೆ ಸಲ್ಲಿಸಬಹುದಾಗಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ ಮತ್ತು ಪ.ಪಂ/ಪ್ರವರ್ಗ-1) ಅಂಕಗಳೊಂದಿಗೆ ಉತ್ತಿರ್ಣರಾದ, 19 ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ಕೃಷಿ, ಜೇನುಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಹಾಗೆಯೇ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...