ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ 07 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevasindhu.karnataka.gov.in/Sevasindhu/DepartmentServicesKannada ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್, 15 ರವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿಕಲಚೇತನರು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್ 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್ 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸುವಂತೆ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.