
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ(ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ.
ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಈ 08 ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ (https://sevasindhu.karnataka.gov.in/Sevasindhu/DepartmentServicesKannada) ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ರವರೆಗೆ ಅವಧಿ ವಿಸ್ತರಿಸಲಾಗಿದೆ. ಜಿಲ್ಲೆಯ ವಿಕಲಚೇತನರು ಸೆಪ್ಟೆಂಬರ್, 30 ರೊಳಗೆ ಅರ್ಜಿ ಸಲ್ಲಿಸುವಂತೆ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.