ಬೆಂಗಳೂರು :ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯಲ್ಲಿ ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳು ಜಾರಿಯಲ್ಲಿವೆ.
ಈ ಯೋಜನೆಗಳಿಗೆ 2023-24ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ವೆಬ್‍ಸೈಟ್ URL:https://Sevasindhu.karnataka.gov.in/ಪೋರ್ಟಲ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಕಲಚೇತನ ಫಲಾನುಭವಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ಅದರ ಹಾರ್ಡ್‍ಕಾಫಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಸಂಬಂಧಪಟ್ಟ ತಾಲೂಕಾ ಪಂಚಾಯತನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಗಳಿಗೆ ಸಲ್ಲಿಸಬೇಕು. ಮತ್ತು ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15 ರ ವರೆಗೆ ವಿಸ್ತರಿಸಲಾಗಿದೆ.