alex Certify ರೈತರಿಗೆ ಗುಡ್ ನ್ಯೂಸ್ : ಹೊಸ ಉದ್ಯೋಗ ಪ್ರಾರಂಭಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ಹೊಸ ಉದ್ಯೋಗ ಪ್ರಾರಂಭಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸ ಉದ್ಯೋಗ ಪ್ರಾರಂಭಿಸಲು ಮತ್ತು ಇರುವ ಉದ್ಯಮಗಳ ವಿಸ್ತರಣೆಗೆ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಯುವಕರಿಗೆ ಉದ್ಯೋಗ ಸೃಜನೆಗಾಗಿ “ಕೃಷಿ ನವೋದ್ಯಮ” ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು.ಆಸಕ್ತ ಉದ್ಯಮದಾರರು ಒಂದು ವಾರದೊಳಗೆ ತಾಲೂಕಿನ ಕೃಷಿ ನಿರ್ದೆಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಕೃಷಿ ಇಲಾಖೆಯಿಂದ ಪರಿಶೀಲನೆ ನಡೆಸಿ ನವೋದ್ಯಮಕ್ಕೆ ಶೇ.50 ರಷ್ಟು ಕನಿಷ್ಠ 5 ಲಕ್ಷದಿಂದ 20 ಲಕ್ಷದವರೆಗೆ ಹಾಗೂ ಹಾಗು ಈಗಾಗಲೇ ಸ್ಥಾಪಿಸಿರುವ ಕೃಷಿ ನವೋದ್ಯಮಗಳ ವಿಸ್ತರಣೆಗೆ 20 ಲಕ್ಷದಿಂದ 50 ಲಕ್ಷದವರೆಗೆ ಖಜಾನೆ-2 ಮೂಲಕ ಸಹಾಯಧನ ನೀಡಲಾಗುತ್ತದೆ.ಆಯ್ಕೆಯಾದ ಕೃಷಿ ನವೋದ್ಯಮಗಳಿಗೆ ವಿವಿಧ ತರಬೇತಿ ಕೇಂದ್ರಗಳಲ್ಲಿ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...