alex Certify ರೈತರಿಗೆ ಮುಖ್ಯ ಮಾಹಿತಿ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮುಖ್ಯ ಮಾಹಿತಿ : ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ : ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಸರ್ಕಾರವು ರಾಜ್ಯದಲ್ಲಿ 2.5 ಲಕ್ಷ ಮೆ. ಟನ್ ಗುರಿ ತಲುಪುವವರೆಗೆ ನೋಂದಣಿ ಕೈಗೊಳ್ಳಲು ಸೂಚಿಸಿದ್ದರಿಂದ, ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡಿಸಿಕೊಳ್ಳಬೇಕು.

ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.9686935278 ಹಾಗೂ ಆಯಾ ತಾಲ್ಲೂಕಿನ ಖರೀದಿ ಕೇಂದ್ರಗಳ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...